SSLC Result 2025 : ಇದೆ ಮೇ 2 ರಂದು 10ನೇ ತರಗತಿಯ ಫಲಿತಾಂಶ ಪ್ರಕಟಣೆ..! ಡೈರೆಕ್ಟ್ ಲಿಂಕ್ ಇಲ್ಲಿದೆ
ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶಗಳು ಮೇ 2 ರಂದು ಪ್ರಕಟವಾಗುವ ಸಾಧ್ಯತೆ ಇದ್ದು, ಸಿಇಟಿ ಫಲಿತಾಂಶಗಳು ಮೇ ಮೂರನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ. ಈ ವಿಷಯದ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೇ ಕೊನೆಯವರೆಗೂ ವೀಕ್ಷಿಸಿ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯು ಈಗಾಗಲೇ ಪೂರ್ಣಗೊಂಡಿದ್ದು, ಕಂಪ್ಯೂಟರ್ ನೋಂದಣಿ ಪ್ರಸ್ತುತ ನಡೆಯುತ್ತಿದೆ. ಮೂಲಗಳ ಪ್ರಕಾರ, ಮೇ 2 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಘೋಷಿಸಲು ಮಂಡಳಿಯು ಸಿದ್ಧತೆ ನಡೆಸುತ್ತಿದೆ.
( SSLC Result 2025 ) 10ನೇ ತರಗತಿ ಫಲಿತಾಂಶ ಪ್ರಕಟಣೆ.
ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ಅಥವಾ ತಮ್ಮ ಅಂಕಗಳಿಂದ ಅತೃಪ್ತರಾಗಿರುವ ವಿದ್ಯಾರ್ಥಿಗಳು ಜೂನ್ ಮತ್ತು ಜುಲೈನಲ್ಲಿ ನಡೆಯುವ ಪರೀಕ್ಷೆ-2 ಮತ್ತು ಪರೀಕ್ಷೆ-3 ಕ್ಕೆ ಹಾಜರಾಗಲು ಅವಕಾಶ ಹೊಂದಿರುತ್ತಾರೆ.
ಈ ವರ್ಷ, 2,818 ಕೇಂದ್ರಗಳಲ್ಲಿ ಒಟ್ಟು 8.96 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಆರು ವಿಷಯಗಳಿಂದ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.

( SSLC Result 2025 ) ಫಲಿತಾಂಶವನ್ನು ಹೇಗೆ ನೋಡುವುದು.?
- ಎಸ್ ಎಸ್ ಎಲ್ ಸಿ ಫಲಿತಾಂಶ ನೋಡಲು ಮೊದಲಿಗೆ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಅಲ್ಲಿ sslc main examination result 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮ್ಮ ನೋಂದಣಿ ಸಂಖ್ಯೆ ನೊಂದಣಿ ಮಾಡಿ.
- ಮತ್ತು ನಿಮ್ಮ ಜನ್ಮ ದಿನಾಂಕವನ್ನು ಸಹ ನಂದಣಿ ಮಾಡಿ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.